Indian navy recruitment 2021 : 300 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯ ಮೆಟ್ರಿಕ್ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ನೌಕಾಪಡೆಯು ಮೆಟ್ರಿಕ್ ನೇಮಕಾತಿಗಾಗಿ 300 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಭಾರತೀಯ ಪ್ರಜೆಗಳಿಂದ (ಅವಿವಾಹಿತ ಪುರುಷ) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತೀಯ ನೌಕಾಪಡೆಯಲ್ಲಿ  ಮೆಟ್ರಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ 2022ನೇ ಸಾಲಿಗೆ ನೇಮಕಾತಿ ನಡೆಸಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಏಪ್ರಿಲ್ 2022 ರಿಂದ ಆರಂಭವಾಗುವ ಕೋರ್ಸ್ ಮೂಲಕ ಭಾರತದ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ನಿಯೋಜಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 29, 2021 ರಿಂದ ನವೆಂಬರ್ 02, 2021ರ ವರೆಗೆ ನಡೆಯಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಭಾರತೀಯ ನೌಕಾಪಡೆ ನೇಮಕಾತಿ 2021 ಅರ್ಹತೆ :

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೆಟ್ರಿಕ್ಯುಲೇಶನ್ ಪರೀಕ್ಷೆ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ದೈಹಿಕ ಮತ್ತು ವೈದ್ಯಕೀಯವಾಗಿ ಫಿಟ್ ಆಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಭಾರತೀಯ ನೌಕಾಪಡೆ ನೇಮಕಾತಿ 2021 ವಯೋಮಿತಿ :

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಏಪ್ರಿಲ್ 1,2002 ರಿಂದ ಮಾರ್ಚ್ 31,2005ರೊಳಗೆ ಜನಿಸಿರಬೇಕು. ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಭಾರತೀಯ ನೌಕಾಪಡೆ ನೇಮಕಾತಿ 2021 ವೇತನ :

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂ ವರೆಗೆ ವೇತನವನ್ನು ನೀಡಲಾಗುವುದು ಎಂದು ಮೆಟ್ರಿಕ್ ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಭಾರತೀಯ ನೌಕಾಪಡೆ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಫಿಟ್‌ನೆಸ್ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.

ಭಾರತೀಯ ನೌಕಾಪಡೆ ನೇಮಕಾತಿ 2021 ಅರ್ಜಿ ಶುಲ್ಕ :

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅರ್ಜಿ ಶುಲ್ಕದ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಓದಬಹುದು.

ಭಾರತೀಯ ನೌಕಾಪಡೆ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rrc-wr.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 29,2021 ರಿಂದ ನವೆಂಬರ್ 2,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳ ಬಗೆಗಿನ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Indian navy recruitment 2021 notification has been released for 300 sailor posts. Interested candidates can apply before November 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+