ಭಾರತೀಯ ನೌಕಾಪಡೆಯು 2700 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.
CRITERIA | DETAILS |
Name Of The Posts | ನಾವಿಕ ಎಎ ಮತ್ತು ಎಸ್ಎಸ್ಆರ್ |
Organisation | ಭಾರತೀಯ ನೌಕಾಪಡೆ |
Educational Qualification | 10+2/ದ್ವಿತೀಯ ಪಿಯುಸಿ |
Job Location | ಭಾರತದೆಲ್ಲೆಡೆ |
Salary Scale | ತಿಂಗಳಿಗೆ 21,700/-ರಿಂದ 69,100/-ರೂ |
Application Start Date | November 4, 2019 |
Application End Date | November 18, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ 10+2/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಆಗಸ್ಟ್ 1,2000 ರಿಂದ ಜುಲೈ 31,2003ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರಿಂದ 69,100/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 215/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.