ಭಾರತೀಯ ನೌಕಾಪಡೆ 1159 ಟ್ರೇಡ್ಸ್ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಮಾರ್ಚ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
10ನೇ ತರಗತಿ/ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಟ್ರೇಡ್ಸ್ಮ್ಯಾನ್ ಮೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 205/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.