Indian Navy Recruitment 2021 : ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯು ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆಯ ಮೂಲಕ ನಾವಿಕ (ಕ್ರೀಡಾ ಕೋಟಾ ಪ್ರವೇಶ) 2022ರ ಬ್ಯಾಚ್‌ನ ಹಲವಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಕ್ರೀಡಾಪಟುಗಳಿಂದ (ಅವಿವಾಹಿತ ಪುರುಷ) ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 2022 ರಲ್ಲಿ ಪ್ರಾರಂಭವಾಗುವ ಕೋರ್ಸ್ ಅನ್ನು ಭಾರತದಲ್ಲಿನ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಪೋಸ್ಟ್ ಮಾಡಲಾಗುತ್ತದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 11,2021 ರಿಂದ ಡಿಸೆಂಬರ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ...ಡಿ.25ರೊಳಗೆ ಅರ್ಜಿ ಹಾಕಿ

ಶೈಕ್ಷಣಿಕ ವಿದ್ಯಾರ್ಹತೆ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಕನಿಷ್ಟ 17 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 43,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಭಾರತೀಯ ನೌಕಾಪಡೆ ನೇಮಕಾತಿಯ ನಾವಿಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/en ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಡಿಸೆಂಬರ್ 25,2021ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian navy recruitment 2021 notification has been released for sailor (Sports Quota Entry) posts. Interested candidates can apply before December 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+