ಭಾರತೀಯ ನೌಕಾಪಡೆಯಲ್ಲಿ 217 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 21,2022 ರಿಂದ ನವೆಂಬರ್ 6,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

Indian Navy ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :
ಸಾಮಾನ್ಯ ಸೇವೆ [GS(X)]/ ಹೈಡ್ರೊ ಕೇಡರ್ - 56 ಹುದ್ದೆಗಳು
ಏರ್ ಟ್ರಾಫಿಕ್ ಕಂಟ್ರೋಲರ್ - 5 ಹುದ್ದೆಗಳು
ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ (ಹಿಂದಿನ ವೀಕ್ಷಕ) - 15 ಹುದ್ದೆಗಳು
ಪೈಲಟ್ - 25 ಹುದ್ದೆಗಳು
ಲಾಜಿಸ್ಟಿಕ್ಸ್ - 20 ಹುದ್ದೆಗಳು
ಶಿಕ್ಷಣ - 12 ಹುದ್ದೆಗಳು
ಎಂಜಿನಿಯರಿಂಗ್ ಶಾಖೆ [ಸಾಮಾನ್ಯ ಸೇವೆ (GS)] - 25 ಹುದ್ದೆಗಳು
ಎಲೆಕ್ಟ್ರಿಕಲ್ ಶಾಖೆ [ಸಾಮಾನ್ಯ ಸೇವೆ (GS)] - 45 ಹುದ್ದೆಗಳು
ನೇವಲ್ ಕನ್ಸ್ಟ್ರಕ್ಟರ್ - 14 ಹುದ್ದೆಗಳು
ಒಟ್ಟು 217 ಹುದ್ದೆಗಳು
Indian Navy ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಟೆಕ್, ಎಂಸಿಎ, ಎಂ.ಎಸ್ಸಿ, ಎಂಬಿಎ, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Indian Navy ನೇಮಕಾತಿ 2022 ವಯೋಮಿತಿ :
ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Indian Navy ನೇಮಕಾತಿ 2022 ವೇತನದ ವಿವರ :
ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- -ರೂಗಳ ವರೆಗೆ ವೇತನವನ್ನು ನೀಡಲಾಗುವುದು.
Indian Navy ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Indian Navy ನೇಮಕಾತಿ 2022 ಅರ್ಜಿ ಶುಲ್ಕ :
ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
Indian Navy ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ಭಾರತೀಯ ನೌಕಾಪಡೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 21,2022 ರಿಂದ ನವೆಂಬರ್ 6,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications