ಭಾರತೀಯ ಪೋಸ್ಟಲ್ ಸರ್ಕಲ್ ನಲ್ಲಿ 1421 ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ ಮತ್ತು ದಖ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಮಾರ್ಚ್ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ,ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


Click it and Unblock the Notifications











