ಭಾರತೀಯ ತೈಲ ನಿಗಮದಲ್ಲಿ 1574 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 15,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಅಪ್ರೆಂಟಿಸ್ |
| Organisation | ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್) |
| Educational Qualification | ಬಿ.ಎಸ್ಸಿ,ಮೆಟ್ರಿಕ್ ಜೊತೆಗೆ ಐಟಿಐ,ಡಿಪ್ಲೋಮಾ,ಬಿ.ಎ/ಬಿ.ಕಾಂ,12ನೇ ತರಗತಿ/ದ್ವಿತೀಯ ಪಿಯುಸಿ |
| Job Location | ಭಾರತದೆಲ್ಲೆಡೆ |
| Application Start Date | October 25, 2019 |
| Application End Date | November 15, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಎಸ್ಸಿ (ಭೌತಶಾಸ್ತ್ರ.ಗಣಿತ,ರಸಾಯನಶಾಸ್ತ್ರ/ಕೈಗಾರಿಕಾ ರಸಾಯನಶಾಸ್ತ್ರ),ಮೆಟ್ರಿಕ್ ಜೊತೆಗೆ ಐಟಿಐ ಕೋರ್ಸ್,ಡಿಪ್ಲೋಮಾ ಇನ್ ಕೆಮಿಕಲ್ ಇಂಜಿನಿಯರಿಂಗ್/ರಿಫೈನರಿ ಮತ್ತು ಪೆಟ್ರೋ-ಕೆಮಿಕಲ್ ಇಂಜಿನಿಯರಿಂಗ್,ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಇನ್‌ಸ್ಟ್ರುಮೆಂಟೇಶನ್/ ಇನ್‌ಸ್ಟ್ರುಮೆಂಟೇಶನ್ ಮತ್ತು ಇಲೆಕ್ಟ್ರಾನಿಕ್ಸ್ /ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್ , ಬಿ.ಎ/ಬಿ.ಕಾಂ ಮತ್ತು 12ನೇತರಗತಿ /ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಅಕ್ಟೋಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಐಓಸಿಎಲ್‌ನ ಅಧಿಕೃತ ವೆಬ್‌ಸೈಟ್ https://www.iocl.com/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 15,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











