IOCL Recruitment 2019: 380 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮದಲ್ಲಿ 380 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

380 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಪ್ರೆಂಟಿಸ್
Organisation ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)
Educational Qualification ಪದವಿ/ಗ್ರಾಜುಯೇಶನ್/ದ್ವಿತೀಯ ಪಿಯುಸಿ ಅಥವಾ 10+2/ಐಟಿಐ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date November 4, 2019
Application End Date November 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ/ ಗ್ರಾಜುಯೇಶನ್/ 12ನೇತರಗತಿ /ದ್ವಿತೀಯ ಪಿಯುಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಕ್ಟೋಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಐಓಸಿಎಲ್‌ನ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 22,2019ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2019 notification has been released on official website for the recruitment of 380 apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X