ಭಾರತೀಯ ತೈಲ ನಿಗಮ (ಐಓಸಿಎಲ್) ನೇಮಕಾತಿ 413 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 7,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ |
| Organisation | ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) |
| Educational Qualification | 10+2 / ಐಟಿಐ, ಡಿಪ್ಲೋಮ |
| Job Location | ಭಾರತದೆಲ್ಲೆಡೆ |
| Salary Scale | ನೇಮಕಾತಿಯ ನಿಯಮಾನುಸಾರ |
| Application Start Date | July 17, 2019 |
| Application End Date | August 7, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ 10+2 ಅಥವಾ ಐಟಿಐ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜುಲೈ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ-ಎನ್‌ಸಿಎಲ್) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಐಓಸಿಎಲ್ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಐಓಸಿಎಲ್‌ನ ಅಧಿಕೃತ ವೆಬ್‌ಸೈಟ್ https://www.iocl.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ
ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











