ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) 68 ಜ್ಯೂನಿಯರ್ ಇಂಜಿನಿಯರ್ ಸಹಾಯಕ ಹುದ್ದೆಗಳ ನೇಮಕಾತಿಗೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಜನವರಿ 7,2019 ರಿಂದ ಜನವರಿ 28,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ ಇಲ್ಲಿವೆ
| CRITERIA | DETAILS |
| Name Of The Posts | ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ |
| Organisation | ಭಾರತೀಯ ತೈಲ ನಿಗಮ ನಿಯಮಿತ |
| Educational Qualification | 3 ವರ್ಷದ ಡಿಪ್ಲೊಮ (ಕೆಮಿಕಲ್/ರಿಫೈನರಿ & ಪೆಟ್ರೋಕೆಮಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಇನ್ಸ್ಟ್ರುಮೆಂಟೇಶನ್/ಇನ್ಸ್ಟ್ರುಮೆಂಟೇಶನ್ & ಎಲೆಕ್ಟ್ರಾನಿಕ್ಸ್/ ಇನ್ಸ್ಟ್ರುಮೆಂಟೇಶನ್ & ಕಂಟ್ರೋಲ್ ಇಂಜಿನಿಯರಿಂಗ್)ಬಿಎಸ್ಸಿ( ಗಣಿತ, ಭೌತಶಾಸ್ತ್ರ,ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರ) |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 11,900/- ರಿಂದ 32,000/-ರೂ |
| Application Start Date | January 7, 2019 |
| Application End Date | January 28, 2019 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಕೆಮಿಕಲ್/ರಿಫೈನರಿ ಮತ್ತು ಪೆಟ್ರೋಕೆಮಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಇನ್ಸ್ಟ್ರುಮೆಂಟೇಶನ್/ಇನ್ಸ್ಟ್ರುಮೆಂಟೇಶನ್ ಮತ್ತು ಎಲೆಕ್ಟ್ರಾನಿಕ್ಸ್/ ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೊಮ ಅಥವಾ ಗಣಿತ, ಭೌತಶಾಸ್ತ್ರ,ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರದಲ್ಲಿ ಬಿಎಸ್ಸಿ ಪದವಿಯನ್ನು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್/ಸಂಸ್ಥೆಯಲ್ಲಿ ಪಡೆದಿರಬೇಕು. ಹಾಗೆಯೇ ಒಟ್ಟಾರೆ ಶೇ 50%ರಷ್ಟು ಅಂಕಗಳನ್ನು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು ಪಡೆದಿರಬೇಕು.ಮೀಸಲಾತಿ ಅಭ್ಯರ್ಥಿಗಳಿದ್ದಲ್ಲಿ ಎಸ್ ಸಿ/ಎಸ್ ಟಿ ಅಭ್ಯರ್ಥಿಗಳು ಶೇ45%ರಷ್ಟು ಅಂಕಗಳು ಅಥವಾ ಫಿಟ್ಟರ್ ಟ್ರೇಡ್ ನಲ್ಲಿ ಐಟಿಐ ಅಥವಾ ಮೆಟ್ರಿಕ್ ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 31 ಡಿಸೆಂಬರ್ 2018 ಕ್ಕೆ 18 ವರ್ಷ ವಯಸ್ಸು ತುಂಬಿರಬೇಕು. ಅರ್ಜಿ ಸಲ್ಲಿಸಲು 18 ರಿಂದ 26 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,900/- ರಿಂದ 32,000/-ರೂಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯ ಜೊತೆಗೆ ಅರ್ಜಿಯ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 150/-ರೂ ಮತ್ತು ಎಸ್ ಸಿ/ಎಸ್ ಟಿ/ಪಿಡಬ್ಲ್ಯೂಡಿ/ಮಾಜಿ ಸೈನಿಕ ಅಭ್ಯರ್ಥಿಗಳು ಈ ಶುಲ್ಕದಿಂದ ವಿನಾಯಿತಿಯನ್ನು ಹೊಂದಿರುತ್ತಾರೆ.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ/ಫಿಸಿಕಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











