ಭಾರತೀಯ ತೈಲ ನಿಗಮವು 482 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
12ನೇ ತರಗತಿ/ಐಟಿಐ/ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











