ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

ಭಾರತೀಯ ತೈಲ ನಿಗಮ ಇಂಜಿನಿಯರ್ ಅಥವಾ ಅಧಿಕಾರಿಗಳು ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಓಸಿಎಲ್ ನೇಮಕಾತಿ 2020: ಮೇ 6ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ / ಬಿ.ಟೆಕ್, ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜೂನ್ 30,2020ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತೀಯ ತೈಲ ನಿಗಮದ ಅಧಿಕೃತ ವೆಬ್‌ಸೈಟ್ https://www.iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
IOCL recruitment 2020 notification has been released in official website for the recruitment of various posts. Interested candidates can apply through online before 6th may 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+