IOCL Recruitment 2021: 346 ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) 346 ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಐಓಸಿಎಲ್ ನಲ್ಲಿ ಉದ್ಯೋಗಾವಕಾಶ...ಮಾ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

10ನೇ ತರಗತಿ, ಐಟಿಐ, ಡಿಪ್ಲೋಮಾ, ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಫೆಬ್ರವರಿ 28,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://iocl.com/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2021 notification has been released for 346 technical and non technical apprentice Posts. Interested candidates can apply through online before March 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X