ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2021ನೇ ಸಾಲಿಗೆ 469 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 5,2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 25, 2021 ರಂದು ಕೊನೆಗೊಳ್ಳಲಿದೆ.

IOCL ನೇಮಕಾತಿ 2021 ಅರ್ಹತೆ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹನ್ನೆರಡನೇ ತರಗತಿ/ಇಂಟರ್‌ಮೀಡಿಯೇಟ್ ಅಥವಾ ಅದಕ್ಕೆ ಸಮನಾದ; ಕಾಮರ್ಸ್ ಪದವಿ; ಪದವಿ; ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

IOCL ನೇಮಕಾತಿ 2021 ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಅಕ್ಟೋಬರ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷದೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IOCL ನೇಮಕಾತಿ 2021 ವೇತನ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು.

IOCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು 2021ರ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IOCL ನೇಮಕಾತಿ 2021 ಅರ್ಜಿ ಶುಲ್ಕ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರವನ್ನು ಪಡೆಯಲು ಲೇಖನದ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ಅಧಿಸೂಚನೆಯನ್ನು ಓದಬಹುದು.

IOCL ನೇಮಕಾತಿ 2021 ಅರ್ಜಿ ಸಲ್ಲಿಕೆ :
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು https://apprenticeshipindia.org/ ವೆಬ್‌ಸೈಟ್ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.