ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಓಸಿಎಲ್) 505 ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
10ನೇ ತರಗತಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಜನವರಿ 31,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://apprenticeshipindia.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











