IOCL Recruitment 2022 : 137 ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 137 ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 24,2022 ರಿಂದ ಫೆಬ್ರವರಿ 18,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಐಒಸಿಎಲ್ ನಲ್ಲಿ 137 ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ೧೦ನೇ ತರಗತಿ/ಮೆಟ್ರಿಕ್ಯುಲೇಶನ್ ಜೊತೆಗೆ ಐಟಿಐ ; ಪದವಿ; ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

IOCL ನೇಮಕಾತಿ 2022 ವಯೋಮಿತಿ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಜನವರಿ 24,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 29 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 31 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

IOCL ನೇಮಕಾತಿ 2022 ವೇತನದ ವಿವರ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25000/- ರಿಂದ Rs. 1,05,000/-ರೂಗಳ ವರೆಗೆ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23000/- ರಿಂದ 78,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

IOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ/ದೈಹಿಕ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IOCL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

IOCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://iocl.com/latest-job-opening ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 24,2022 ರಿಂದ ಫೆಬ್ರವರಿ 18,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IOCL recruitment 2022 notification has been released for 137 non executive engineering assistant and technical attendant posts. Interested candidates can apply before February 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X