ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 43 ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 17,2022 ರಿಂದ ಜೂನ್ 16,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

IOCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಎಂಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
IOCL ನೇಮಕಾತಿ 2022 ವಯೋಮಿತಿ :
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
IOCL ನೇಮಕಾತಿ 2022 ವೇತನದ ವಿವರ :
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 2,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

IOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
IOCL ನೇಮಕಾತಿ 2022 ಅರ್ಜಿ ಶುಲ್ಕ :
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ 300/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಇ-ಕಲೆಕ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
IOCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಮತ್ತು ಅಡಿಷನಲ್ ಚೀಫ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.ioclrecruit.com/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 17 ರಿಂದ ಜೂನ್ 16,2022ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Advertiser, Post Box No.3096, Head Post Office, Lodhi Road, New Delhi - 110003.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











