ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ 41 ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 4,2022 ರಿಂದ ನವೆಂಬರ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

IPPB ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :
ಸಹಾಯಕ ವ್ಯವಸ್ಥಾಪಕ - 18 ಹುದ್ದೆಗಳು
ವ್ಯವಸ್ಥಾಪಕ - 13 ಹುದ್ದೆಗಳು
ಹಿರಿಯ ವ್ಯವಸ್ಥಾಪಕ - 8 ಹುದ್ದೆಗಳು
ಮುಖ್ಯ ವ್ಯವಸ್ಥಾಪಕ - 2 ಹುದ್ದೆಗಳು
ಒಟ್ಟು 41 ಹುದ್ದೆಗಳು
IPPB ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಬಿಸಿಎ, ಬಿಎಸ್ಸಿ, ಬಿ.ಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
IPPB ನೇಮಕಾತಿ 2022 ವಯೋಮಿತಿ :
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅಕ್ಟೋಬರ್ 1,2022ರ ಅನ್ವಯ ಕನಿಷ್ಟ 20 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
IPPB ನೇಮಕಾತಿ 2022 ವೇತನದ ವಿವರ :
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

IPPB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
IPPB ನೇಮಕಾತಿ 2022 ಅರ್ಜಿ ಶುಲ್ಕ :
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
IPPB ನೇಮಕಾತಿ 2022 ಅರ್ಜಿ ಸಲ್ಲಿಕೆ :
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ippbonline.com ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 4 ರಿಂದ ನವೆಂಬರ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











