ಐಆರ್ಸಿಓಎನ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ 32 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಸೆಪ್ಟೆಂಬರ್ 13,2021ರೊಳಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಆಗಸ್ಟ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸ್ಟೈಫೆಂಡ್:
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,500/-ರೂ ಸ್ಟೈಫೆಂಡ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನಂತರ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.ircon.org/index.php?lang=en ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.