IRCON Recruitment 2022 : 16 ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ 16 ಸೈಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

IRCON ನೇಮಕಾತಿ 2022 ವಿದ್ಯಾರ್ಹತೆ :

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IRCON ನೇಮಕಾತಿ 2022 ವಯೋಮಿತಿ :

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 1,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IRCON ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IRCON ನೇಮಕಾತಿ 2022 ವೇತನ :

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,10,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

IRCON ನೇಮಕಾತಿ 2022 ಅರ್ಜಿ ಶುಲ್ಕ :

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-I/ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

IRCON ನೇಮಕಾತಿ 2022 ಅರ್ಜಿ ಸಲ್ಲಿಕೆ :

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನೇಮಕಾತಿಯ ಸೈಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ircon.org/index.php?lang=en ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು.

ಕಚೇರಿ ವಿಳಾಸ:
JGM/HRM,
Ircon International Ltd.,
C-4, District Centre, Saket,
New Delhi - 110017.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IRCON recruitment 2022 notification has been released for 16 site manager posts. Interested candidates can apply before November 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X