ಐಆರ್ ಸಿಟಿಸಿ ಕ್ಯಾಟೆರಿಂಗ್ ಮತ್ತು ಟೂರಿಸಮ್ ಕಾರ್ಪೋರೇಶನ್ ನಲ್ಲಿ 50ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಆರ್ ಸಿಟಿಸಿ ನೇಮಕಾತಿ 2019 ,ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಖಾಲಿ ಇರುವ 50 ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಫೆಬ್ರವರಿ 16 ಮತ್ತು 19 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಬೇಕು.

ಐಆರ್ ಸಿಟಿಸಿಯಲ್ಲಿ  ಬಿಎಸ್ಸಿ ಪದವೀಧರರಿಗೊಂದು ಉದ್ಯೋಗಾವಕಾಶ

CRITERIA DETAILS
Name Of The Posts ಮೇಲ್ವಿಚಾರಕ
Organisation ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್
Educational Qualification Bsc (Hospitality &Hotel administration)
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/- ರೂ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಯನ್ನು ಹಾಸ್ಪಿಟಾಲಿಟಿ ಮತ್ತು ಹೋಟೆಲ್ ಅಡ್ಮಿನಿಸ್ಟ್ರೇಶನ್ ನಲ್ಲಿ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ನಲ್ಲಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಜನವರಿ1,2019 ಕ್ಕೆ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರೂ ವೇತನದ ಜೊತೆಗೆ ಇನ್ನಿತರೆ ಭತ್ಯೆಗಳನ್ನು ಸಂಸ್ಥೆಯು ನೀಡುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶದ ಯಾವುದೇ ಐಆರ್ ಸಿಟಿಸಿ ಇಲಾಖೆಯಲ್ಲಿ ನೇಮಕಾತಿ ಮಾಡಿದರೂ ಅಭ್ಯರ್ಥಿಗಳು ಕೆಲಸ ನಿರ್ವಹಿಸಲು ಸಿದ್ದರಿರಬೇಕು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಅವುಗಳ ವಿವರವನ್ನು ಅಧಿಸೂಚನೆಯಲ್ಲಿ ನೀಡಿರುವ ಮಾಹಿತಿಯ ಅನುಸಾರ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ನೀಡಲಾಗಿರುವ ಅರ್ಜಿಯನ್ನು ತೆಗೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆ ಮತ್ತು ಪ್ರತಿಗಳೊಂದಿಗೆ ಫೆಬ್ರವರಿ 16 ಮತ್ತು 19 ರಂದು ನಡೆಯುವ ನೇರ ಸಂದರ್ಶನಲ್ಲಿ ಭಾಗವಹಿಸಬೇಕು.

ಸಂದರ್ಶನ ನಡೆಯುವ ವಿಳಾಸ:

ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಎಫ್-ರೋ, ವಿದ್ಯಾ ನಗರ, ಡಿಡಿ ಕಾಲೋನಿ, ಹೈದರಾಬಾದ್, ತೆಲಂಗಾಣ 500007- ಸಂದರ್ಶನದ ದಿನ ಮತ್ತು ಸಮಯ- ಫೆಬ್ರವರಿ 16,2019ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಬಳಿ, ವಿ.ಎಸ್.ಎಸ್ ನಗರ, ಬುಬನೇಶ್ವರ್, ಒಡಿಶಾ 751007 - ಸಂದರ್ಶನದ ದಿನ ಮತ್ತು ಸಮಯ- ಫೆಬ್ರವರಿ 19,2019 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

More News  

For Quick Alerts
ALLOW NOTIFICATIONS  
For Daily Alerts

English summary
IRCTC notification has been released and inviting applications for 50 supervisor posts. Interested candidates can attend walk-in-interview on 16th and 19th february 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+