ಐಆರ್‌ಸಿಟಿಸಿ 2019: ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್‌ಸಿಟಿಸಿ) 92 ಮೇಲ್ವಿಚಾರಕ (ಹಾಸ್ಪಿಟಾಲಿಟಿ) ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಸಂದರ್ಶನವು ದೇಶದ ವಿವಿಧೆಡೆ ನಡೆಯುತ್ತಿದ್ದು ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಆರ್‌ಸಿಟಿಸಿ 92 ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಮೇಲ್ವಿಚಾರಕ
Organisation ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್‌ಸಿಟಿಸಿ)
Educational Qualification ಬಿ.ಎಸ್ಸಿ ಇನ್ ಹಾಸ್ಪಿಟಾಲಿಟಿ ಮತ್ತು ಹೋಟೆಲ್ ಅಡ್ಮಿನಿಸ್ಟ್ರೇಶನ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/-ರೂ
Application Start Date July 24, 2019

ವಿದ್ಯಾರ್ಹತೆ:

ಹಾಸ್ಪಿಟಾಲಿಟಿ ಮತ್ತು ಹೋಟೆಲ್ ಅಡ್ಮಿನಿಸ್ಟ್ರೇಶನ್ ನಲ್ಲಿ ಬಿ.ಎಸ್ಸಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.irctc.com/displayServlet ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
IRCTC Recruitment 2019-20: Apply Offline for 92 Supervisor vacancies. Indian Railway Catering and Tourism Corporation Limited (IRCTC) invited applications from eligible and interested candidates to fill up Supervisor Posts through IRCTC official notification July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+