ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇಂಜಿನಿಯರುಗಳು ಮತ್ತು ವಿಜ್ಞಾನಿಗಳು ಮೆಕಾನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪದವಿ ಗಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 80 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
- ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ-35
- ಮೆಕ್ಯಾನಿಕಲ್ ವಿಭಾಗದಲ್ಲಿ-35
- ಕಂಪ್ಯೂಟರ್ ಸೈನ್ಸ್‌ನಲ್ಲಿ-10
ವಯೋಮಿತಿ
ದಿನಾಂಕ 05-10-2017 ಕ್ಕೆ ಗರಿಷ್ಠ 35 ವರ್ಷ. ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ವೇತನ: ರೂ.56100/-+ ಇತರೆ ಭತ್ಯೆಗಳು.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದ್ದು, isro.gov.in ಮುಖಾಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
- ಎಸ್.ಸಿ/ಎಸ್.ಟಿ/ಮಾ.ಸೈ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನ: 05-10-2017
ಆಯ್ಕೆ ಪ್ರಕ್ರಿಯೆ
ಶೈಕ್ಷಣಿಕ ಸಾಧನೆ ಮತ್ತು ಲಿಖಿತ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳು
ಲಿಖಿತ ಪರೀಕ್ಷೆ ಡಿ. 24ರಂದು ಅಹಮದಾಬಾದ್, ಬೆಂಗಳೂರು, ಭೋಪಾಲ್, ಚಂಡೀಗಢ, ಚೆನ್ನೈ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಖನೌ, ಮುಂಬೈ, ದೆಹಲಿ ಮತ್ತು ತಿರುವನಂತಪುರಂ ಕೇಂದ್ರಗಳಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











