ಇಸ್ರೋದಲ್ಲಿ 21 ಹುದ್ದೆಗಳು ಖಾಲಿ ಇವೆ… ಆಸಕ್ತರು ಇಂದೇ ಅರ್ಜಿ ಹಾಕಿ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಒಟ್ಟು 21 ವಿಜ್ಞಾನಿ / ಇಂಜಿನಿಯರ್ 'ಎಸ್‌ಸಿ' ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇಸ್ರೋದಲ್ಲಿ ಉದ್ಯೋಗಾವಕಾಶ.. ಅರ್ಜಿ ಹಾಕಲು ಅಕ್ಟೋಬರ್ 14ಕೊನೆಯ ದಿನ

 

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್ 14,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಯಾವೆಲ್ಲಾ ಉದ್ಯೋಗಗಳು ಖಾಲಿ ಮತ್ತು ಎಷ್ಟು ವೇತನವನ್ನು ನೀಡಲಾಗುವುದು ಎನ್ನುವ ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಯಾವೆಲ್ಲಾ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ?

ಯಾವೆಲ್ಲಾ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ?

ವಿಜ್ಞಾನಿ/ಇಂಜಿನಿಯರ್ 'ಎಸ್‌ಸಿ' (ಸಿವಿಲ್)- 11,ವಿಜ್ಞಾನಿ/ಇಂಜಿನಿಯರ್ 'ಎಸ್‌ಸಿ' (ಇಲೆಕ್ಟ್ರಿಕಲ್‌)-5,ವಿಜ್ಞಾನಿ/ಇಂಜಿನಿಯರ್ 'ಎಸ್‌ಸಿ' (ರೆಫ್ರಿಜರೇಶನ್‌ & ಏರ್‌ ಕಂಡೀಷನಿಂಗ್‌)-4 ಮತ್ತು ವಿಜ್ಞಾನಿ/ಇಂಜಿನಿಯರ್ 'ಎಸ್‌ಸಿ' (ಆರ್ಕಿಟೆಕ್ಚರ್)-1 ಹುದ್ದೆಗಳು ಸೇರಿ ಒಟ್ಟು 21 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಬಿ.ಇ / ಬಿ.ಟೆಕ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಏನಿರಬೇಕು ?
 

ವಯೋಮಿತಿ ಏನಿರಬೇಕು ?

ಅಕ್ಟೋಬರ್ 14,2019ರ ಅನ್ವಯ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನವೆಷ್ಟು ?

ವೇತನವೆಷ್ಟು ?

ವಿಜ್ಞಾನಿ ಅಥವಾ ಇಂಜಿನಿಯರ್ 'ಎಸ್‌ಸಿ' ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಉದ್ಯೋಗ ಮಾಡಬೇಕಿರುವುದು ಎಲ್ಲಿ ?

ಉದ್ಯೋಗ ಮಾಡಬೇಕಿರುವುದು ಎಲ್ಲಿ ?

ನೇಮಕಗೊಳ್ಳುವ ಸಿಬ್ಬಂದಿಯು ಬೆಂಗಳೂರಿನ ಇಸ್ರೊ ಕೇಂದ್ರ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗಳನ್ನು ಭಾರತದೆಲ್ಲೆಡೆ ಇರುವ ಇಸ್ರೋ ಕಚೇರಿಗಳಿಗೆ ವರ್ಗಾಯಿಸಬಹುದು.

ಅರ್ಜಿ ಶುಲ್ಕ ಎಷ್ಟು ?

ಅರ್ಜಿ ಶುಲ್ಕ ಎಷ್ಟು ?

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯ್ತಿ ಹೊಂದಿರುತ್ತಾರೆ.

ನೇಮಕ ಹೇಗೆ ಮಾಡಲಾಗುವುದು ?

ನೇಮಕ ಹೇಗೆ ಮಾಡಲಾಗುವುದು ?

ಅರ್ಜಿದಾರರ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುವುದು. ಅದರಲ್ಲಿ ಶೇ.60 ರಷ್ಟು ಅಂಕ ಪಡೆದ ಅಭ್ಯರ್ಥಿಗಳಲ್ಲಿ ಯಾರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೆಯೋ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ ?

ಅರ್ಜಿ ಸಲ್ಲಿಸುವುದು ಹೇಗೆ ?

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isac.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 14,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ISRO recruitment 2019 notification has been released on official website for the recruitment of 21 scientist / engineer SC posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X