ಇಸ್ರೋದಲ್ಲಿ 327 ಹುದ್ದೆಗಳು ಖಾಲಿ ಇವೆ… ಆಸಕ್ತರು ಇಂದೇ ಅರ್ಜಿ ಹಾಕಿ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಭಾರತದಲ್ಲೆಡೆ ಒಟ್ಟು 327 ವಿಜ್ಞಾನಿ / ಇಂಜಿನಿಯರ್ 'ಎಸ್‌ಸಿ' ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇಸ್ರೋದಲ್ಲಿ ಉದ್ಯೋಗಾವಕಾಶ.. ಅರ್ಜಿ ಹಾಕಲು ನ.4 ಕೊನೆಯ ದಿನ

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್ 4,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಯಾವೆಲ್ಲಾ ಉದ್ಯೋಗಗಳು ಖಾಲಿ ಮತ್ತು ಎಷ್ಟು ವೇತನವನ್ನು ನೀಡಲಾಗುವುದು ಎನ್ನುವ ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಯಾವೆಲ್ಲಾ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ?

ಯಾವೆಲ್ಲಾ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ?

ವಿಜ್ಞಾನಿ/ಇಂಜಿನಿಯರ್- ಎಸ್‌ಸಿ (ಇಲೆಕ್ಟ್ರಾನಿಕ್ಸ್)-131 ಹುದ್ದೆಗಳು,ವಿಜ್ಞಾನಿ/ಇಂಜಿನಿಯರ್ -ಎಸ್‌ಸಿ (ಮೆಕ್ಯಾನಿಕಲ್)-135 ಹುದ್ದೆಗಳು,ವಿಜ್ಞಾನಿ/ಇಂಜಿನಿಯರ್ -ಎಸ್‌ಸಿ (ಕಂಪ್ಯೂಟರ್ ಸೈನ್ಸ್)- 58 ಹುದ್ದೆಗಳು ಮತ್ತು ವಿಜ್ಞಾನಿ/ಇಂಜಿನಿಯರ್- ಎಸ್‌ಸಿ (ಇಲೆಕ್ಟ್ರಾನಿಕ್ಸ್)-3 ಹುದ್ದೆಗಳು ಸೇರಿ ಒಟ್ಟು 327 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಬಿ.ಇ / ಬಿ.ಟೆಕ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.65 ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಏನಿರಬೇಕು ?

ವಯೋಮಿತಿ ಏನಿರಬೇಕು ?

ನವೆಂಬರ್ 4,2019ರ ಅನ್ವಯ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನವೆಷ್ಟು ?

ವೇತನವೆಷ್ಟು ?

ಇಸ್ರೋ ನೇಮಕಾತಿಯ ವಿಜ್ಞಾನಿ ಅಥವಾ ಇಂಜಿನಿಯರ್ 'ಎಸ್‌ಸಿ' ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂ ವೇತನವನ್ನು ನೀಡಲಾಗುವುದು.

 

ನೇಮಕ ಹೇಗೆ ಮಾಡಲಾಗುವುದು ?

ನೇಮಕ ಹೇಗೆ ಮಾಡಲಾಗುವುದು ?

ಅರ್ಜಿದಾರರ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳಿಗೆ ಜನವರಿ 12,2020ರಂದು ವಿವಿಧ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುವುದು. ಅದರಲ್ಲಿ ಶೇ. 60 ರಷ್ಟು ಅಂಕ ಪಡೆದ ಅಭ್ಯರ್ಥಿಗಳಲ್ಲಿ ಯಾರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೆಯೋ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ ಎಷ್ಟು ?

ಅರ್ಜಿ ಶುಲ್ಕ ಎಷ್ಟು ?

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯಿತಿ ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ ?

ಅರ್ಜಿ ಸಲ್ಲಿಸುವುದು ಹೇಗೆ ?

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isro.gov.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 4,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ISRO recruitment 2019 notification has been released on official website for the recruitment of 327 scientist / engineer SC posts. Interested candidates can apply through online before 4th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+