ಇಸ್ರೋದಲ್ಲಿ ಉದ್ಯೋಗ ಬೇಕಾ? ಹಾಗಿದ್ರೆ.. ಅರ್ಜಿ ಹಾಕಲು ಇಂದೇ ಕೊನೆಯ ದಿನ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಒಟ್ಟು 86 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಇಸ್ರೋದಲ್ಲಿ ಉದ್ಯೋಗಾವಕಾಶ.. ಅರ್ಜಿ ಹಾಕಲು ಸೆಪ್ಟೆಂಬರ್ 13 ಕೊನೆಯ ದಿನ

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್ 13,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಯಾವೆಲ್ಲಾ ಉದ್ಯೋಗಗಳು ಖಾಲಿ ಮತ್ತು ಎಷ್ಟು ವೇತನವನ್ನು ನೀಡಲಾಗುವುದು ಎನ್ನುವ ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಯಾವೆಲ್ಲಾ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ?

ಯಾವೆಲ್ಲಾ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ?

ಫಿಟ್ಟರ್‌-20, ಇಲೆಕ್ಟ್ರಾನಿಕ್‌ ಮೆಕ್ಯಾನಿಕ್‌-15, ಪ್ಲಂಬರ್‌-02, ವೆಲ್ಡರ್‌-01, ಮೆಷಿನಿಸ್ಟ್‌-01, ಡ್ರಾಟ್ಸ್‌ಮೆನ್‌ (ಮೆಕ್ಯಾನಿಕಲ್‌)-10, ಡ್ರಾಟ್ಸ್‌ಮೆನ್‌ (ಎಲೆಕ್ಟ್ರಿಕಲ್‌)-02, ಟೆಕ್ನಿಕಲ್‌ ಅಸಿಸ್ಟೆಂಟ್‌ (ಮೆಕ್ಯಾನಿಕಲ್‌)-20, ಟೆಕ್ನಿಕಲ್‌ ಅಸಿಸ್ಟೆಂಟ್‌ (ಇಲೆಕ್ಟ್ರಾನಿಕ್ಸ್‌ )-12 ಮತ್ತು ಟೆಕ್ನಿಕಲ್‌ ಅಸಿಸ್ಟೆಂಟ್‌ (ಸಿವಿಲ್‌)-03 ಹುದ್ದೆಗಳು ಸೇರಿ ಒಟ್ಟು 86 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಎಸ್‌ಎಸ್‌ಎಲ್‌ಸಿ /ಎಸ್‌ಎಸ್‌ಸಿ / ಮೆಟ್ರಿಕ್ಯುಲೇಶನ್‌ ಪಾಸ್ ಜೊತೆಗೆ ಎನ್‌ಸಿವಿಟಿಯಿಂದ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ/ಎನ್‌ಟಿಸಿ/ಎನ್‌ಎಸಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳು ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

ವಯೋಮಿತಿ ಎಷ್ಟಿರಬೇಕು ?

ವಯೋಮಿತಿ ಎಷ್ಟಿರಬೇಕು ?

ಸೆಪ್ಟೆಂಬರ್ 13,2019 ರ ಅನ್ವಯ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

ವೇತನವೆಷ್ಟು ?

ವೇತನವೆಷ್ಟು ?

ಟೆಕ್ನೀಶಿಯನ್-ಬಿ ಮತ್ತು ಡ್ರಾಟ್ಸ್‌ಮೆನ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ ವೇತನವನ್ನು ನೀಡಲಾಗುವುದು.

ಉದ್ಯೋಗ ಮಾಡಬೇಕಿರುವುದು ಎಲ್ಲಿ ?

ಉದ್ಯೋಗ ಮಾಡಬೇಕಿರುವುದು ಎಲ್ಲಿ ?

ನೇಮಕಗೊಳ್ಳುವ ಸಿಬ್ಬಂದಿಯು ಬೆಂಗಳೂರಿನ ಇಸ್ರೊ ಕೇಂದ್ರ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗಳನ್ನು ಭಾರತದೆಲ್ಲೆಡೆ ಇರುವ ಇಸ್ರೋ ಕಚೇರಿಗಳಿಗೆ ವರ್ಗಾಯಿಸಬಹುದು.

ಅರ್ಜಿ ಶುಲ್ಕ ಎಷ್ಟು ?

ಅರ್ಜಿ ಶುಲ್ಕ ಎಷ್ಟು ?

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳು 250/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯ್ತಿ ಹೊಂದಿರುತ್ತಾರೆ.

 

ನೇಮಕ ಹೇಗೆ ಮಾಡಲಾಗುವುದು ?

ನೇಮಕ ಹೇಗೆ ಮಾಡಲಾಗುವುದು ?

ಅರ್ಜಿದಾರರ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುವುದು. ಅದರಲ್ಲಿ ಶೇ. 60 ರಷ್ಟು ಅಂಕ ಪಡೆದ ಅಭ್ಯರ್ಥಿಗಳಲ್ಲಿ ಯಾರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೆಯೋ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು.

 

ಅರ್ಜಿ ಸಲ್ಲಿಸುವುದು ಹೇಗೆ ?

ಅರ್ಜಿ ಸಲ್ಲಿಸುವುದು ಹೇಗೆ ?

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isac.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಸೆಪ್ಟೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ISRO recruitment 2019 notification has been released on official website for the recruitment of 86 technician-B,draughtsman-B and technical assistant posts. Interested candidates can apply before 13th september 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+