ISRO Recruitment 2021 : 18 ಜೂನಿಯರ್ ರಿಸರ್ಚ್ ಫೆಲೋ ಮತ್ತು ಆರ್‌ಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಅಡಿಯಲ್ಲಿ 18 ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಭಾರತೀಯ ಪ್ರಜೆಗಳಿಂದ ಆನ್ಲೈನ್ ​​ಅರ್ಜಿಗಳನ್ನು ಆಹ್ವಾನಿಸಿದೆ. ಇಸ್ರೋದಲ್ಲಿ ನೇರ ನೇಮಕಾತಿ ಮೂಲಕ ಭಾರತದ ಬೆಂಗಳೂರಿನಲ್ಲಿರುವ UR ರಾವ್ ಉಪಗ್ರಹ ಕೇಂದ್ರದಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕರ್ತವ್ಯ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 11, 2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 1, 2021ರ ವರೆಗೆ ನಡೆಯಲಿದೆ.

ಇಸ್ರೋ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಇಸ್ರೋ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) - 16 ಹುದ್ದೆಗಳು
ರಿಸರ್ಚ್ ಅಸೋಸಿಯೇಟ್ (ಆರ್‌ಎ) - 02 ಹುದ್ದೆಗಳು
ಒಟ್ಟು - 18 ಹುದ್ದೆಗಳು

ಇಸ್ರೋ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ:

ಇಸ್ರೋ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ:

ಇಸ್ರೋ ನೇಮಕಾತಿ 2021 ರ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಸ್ರೋ ಅಧಿಸೂಚನೆಯಲ್ಲಿ ವಿವರಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂಧಿತ ವಿಭಾಗಗಳಲ್ಲಿ ಎಂಇ/ಎಂಟೆಕ್/ಎಂಎಸ್‌ಸಿ/ಪಿಎಚ್‌ಡಿ ಹೊಂದಿರಬೇಕು.

ಇಸ್ರೋ ನೇಮಕಾತಿ 2021 ವಯೋಮಿತಿ:

ಇಸ್ರೋ ನೇಮಕಾತಿ 2021 ವಯೋಮಿತಿ:

ಇಸ್ರೋ ನೇಮಕಾತಿ 2021 ರ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 2021 ಅಕ್ಟೋಬರ್ 1ರ ವೇಳೆಗೆ 35 ವರ್ಷ (ರಿಸರ್ಚ್ ಅಸೋಸಿಯೇಟ್) ಮತ್ತು 28 ವರ್ಷ (ಜೆಆರ್‌ಎಫ್) ವಯೋಮಿತಿಯನ್ನು ಮೀರಿರಬಾರದು. ಇಸ್ರೋ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕ್ರಮವಾಗಿ 3 ವರ್ಷಗಳು (ಒಬಿಸಿ) ಮತ್ತು 5 ವರ್ಷಗಳ (ಎಸ್‌ಸಿ/ಎಸ್‌ಟಿ) ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಇಸ್ರೋ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಇಸ್ರೋ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಇಸ್ರೋ ನೇಮಕಾತಿ 2021 ರ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಇಸ್ರೋ ನೇಮಕಾತಿ 2021 ವೇತನ ಶ್ರೇಣಿ:

ಇಸ್ರೋ ನೇಮಕಾತಿ 2021 ವೇತನ ಶ್ರೇಣಿ:

ಇಸ್ರೋ ನೇಮಕಾತಿ 2021 ರ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,100/-ರೂ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 47,100/-ರೂ ವೇತನವನ್ನು ನೀಡಲಾಗುವುದು.

ಇಸ್ರೋ ನೇಮಕಾತಿ 2021 ಅರ್ಜಿ ಶುಲ್ಕ:

ಇಸ್ರೋ ನೇಮಕಾತಿ 2021 ಅರ್ಜಿ ಶುಲ್ಕ:

ಇಸ್ರೋ ನೇಮಕಾತಿ 2021 ರ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕಕ್ಕೆ ಸಂಬಂಧಿಸಿದ ವಿವರಗಳಿಗಾಗಿ ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಇಸ್ರೋ ಅಧಿಸೂಚನೆ 2021 ಅನ್ನು ನೋಡಿ.

ಇಸ್ರೋ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಇಸ್ರೋ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಇಸ್ರೋ ನೇಮಕಾತಿ 2021ರ ಮೂಲಕ ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್
https://www.isro.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 1,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ISRO recruitment 2021 notification has been released for 18 junior research fellow and research associate posts. Interested candidates can apply through online before October 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+