ISRO Recruitment 2021: 24 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಸ್ರೋದಲ್ಲಿ 24 ಅಧಿಕಾರಿ ಹುದ್ದೆಗಳ ನೇಮಕಾತಿ.. ಏ.21ರೊಳಗೆ ಅರ್ಜಿ ಹಾಕಿ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಭಾರತದಲ್ಲೆಡೆ ಒಟ್ಟು 24 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್ 21,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?

ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಎಂಬಿಎ, ಎಸಿಎ/ಎಫ್‌ಸಿಎ ಅಥವಾ ಅಐಸಿಡಬ್ಲ್ಯೂಎ/ಎಫ್‌ಐಸಿಡಬ್ಲ್ಯೂಎ, ಪದವಿ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?

ವಯೋಮಿತಿ ಎಷ್ಟಿರಬೇಕು ?

ಏಪ್ರಿಲ್ 21,2021ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನವೆಷ್ಟು ?

ವೇತನವೆಷ್ಟು ?

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ ಎಷ್ಟು ?

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ ಎಷ್ಟು ?

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಆಯ್ಕೆ ಮಾಡಲಾಗುವುದು. ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು 250/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಹತ್ತಿರದ ಎಸ್‌ಬಿಐ ಶಾಖೆಗಳಲ್ಲಿ ಪಾವತಿಸಬಹುದು. ಮಹಿಳೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯಿತಿ ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isro.gov.in/ ಗೆ ಭೇಟಿ ನೀಡಿ. ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಏಪ್ರಿಲ್ 1,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 21,2021
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಏಪ್ರಿಲ್ 23,2021

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ISRO Recruitment 2021 notification released for 24 officer posts. Interested candidates can apply through online before April 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+