ಐಟಿಬಿಪಿ ಯಲ್ಲಿ 51 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) 51 ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಕ್ರೀಡಾ ಕೋಟಾದಡಿ ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಕೆಲಸ ನಿರ್ವಹಿಸಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 26,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಐಟಿಬಿಪಿ ಯಲ್ಲಿ 51 ಹುದ್ದೆಗಳಿವೆ..ಆ.26ರೊಳಗೆ ಅರ್ಜಿ ಹಾಕಿ

ಶೈಕ್ಷಣಿಕ ವಿದ್ಯಾರ್ಹತೆ:

ಐಟಿಬಿಪಿ ನೇಮಕಾತಿಯ ಕಾನ್ಸ್ ಟೇಬಲ್ ಹುದ್ದೆಗಳಿಗೆ 10ನೇ ತರಗತಿ/ಮೆಟ್ರಿಕ್ಯುಲೇಶನ್/ಎಸ್‌ಎಸ್‌ಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕಾನ್ಸ್ ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅನ್ನು ಆನ್‌ಲೈನ್ ಅಥವಾ ಇತರೆ ಮೋಡ್ ಗಳ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಟಿಬಿಪಿ ಯ ಅಧಿಕೃತ ವೆಬ್‌ಸೈಟ್ https://www.itbpolice.nic.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 26,2020ರಂದು ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITBP released recruitment notification for the recruitment of 51 constable posts. Interested candidates can apply through online before August 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+