ITBP Recruitment 2021 :553 ವೈದ್ಯಕೀಯ ಅಧಿಕಾರಿ ಮತ್ತು ದಂತ ಶಸ್ತ್ರಚಿಕಿತ್ಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) 553 ವೈದ್ಯಕೀಯ ಅಧಿಕಾರಿ ಮತ್ತು ದಂತ ಶಸ್ತ್ರಚಿಕಿತ್ಸಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಐಟಿಬಿಪಿಯಲ್ಲಿ 553 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂಬಿಬಿಎಸ್, ಪದವಿ, ಪೋಸ್ಟ್ ಗ್ರಾಜುಯೇಟ್, ಡಿಎಂ, ಎಂಸಿಹೆಚ್, ಬಿಡಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನ:

ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ವೈದ್ಯಕೀಯ ಅಧಿಕಾರಿ ಮತ್ತು ದಂತ ಶಸ್ತ್ರಚಿಕಿತ್ಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,09,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 400/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಕೃತ ವೆಬ್‌ಸೈಟ್ https://www.itbpolice.nic.in/ ಗೆ ಭೇಟ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 27,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ITBP recruitment 2021 notification has been released for 553 medical officer and dental surgeon posts. Interested candidates can apply through online before October 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+