ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ 18 ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 17,2022 ರಿಂದ ಸೆಪ್ಟೆಂಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ITBP ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.
ITBP ನೇಮಕಾತಿ 2022 ವಯೋಮಿತಿ :
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 15,2022ರ ಅನ್ವಯ ಕನಿಷ್ಟ್ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ITBP ನೇಮಕಾತಿ 2022 ವೇತನ :
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ITBP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ITBP ನೇಮಕಾತಿ 2022 ಅರ್ಜಿ ಶುಲ್ಕ :
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳೆ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ITBP ನೇಮಕಾತಿ 2022 ಅರ್ಜಿ ಸಲ್ಲಿಕೆ :
ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಸಬ್ ಇನ್‌ಸ್ಪೆಕ್ಟರ್ (ಸ್ಟಾಫ್ ನರ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://itbpolice.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 17 ರಿಂದ ಸೆಪ್ಟೆಂಬರ್ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.