ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ) ನೇಮಕಾತಿ 3ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಒಮ್ಮೆ ಓದಿಕೊಂಡು ನಂತರ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಫೆಬ್ರವರಿ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ (ಸಿವಿಲ್) |
| Organisation | ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ( ITI Limited) |
| Educational Qualification | ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 37,247/-ರೂ |
| Application Start Date | February 13, 2019 |
| Application End Date | February 28, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸಾಮಾನ್ಯ ಅಥವಾ ಓಬಿಸಿ ಅಭ್ಯರ್ಥಿಗಳು ಶೇ 65 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶೇ63 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,247/-ರೂ ವೇತನವನ್ನು ನೀಡಲಾಗುವುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ ಅಭ್ಯರ್ಥಿಗಳಿಗೆ 5ವರ್ಷ ಮತ್ತು ಓಬಿಸಿ ( ನಾನ್-ಕ್ರೀಮಿ ಲೇಯರ್) ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಟಿಐ ಲಿಮಿಟೆಡ್ ನ ಅಧಿಕೃತ ವೆಬ್ ಸೈಟ್ http://www.itiltd-india.com./ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ಜೊತೆಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ವಿಳಾಸ:
Dy. General Manager-HR,
ITI Limited,
Bangalore Plant,
Doorvani Nagar,
Bangaluru -16.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











