ITI: 129 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 129 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಇತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಐಟಿಐ ಲಿಮಿಟೆಡ್ ನಲ್ಲಿ 129 ಹುದ್ದೆಗಳಿವೆ..ಜ.30ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಕಾಂಟ್ರಾಕ್ಟ್ ಇಂಜಿನಿಯರ್
Organisation ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)
Educational Qualification ಬಿ.ಇ/ಬಿ.ಟೆಕ್/ಇಲೆಕ್ಟ್ರಾನಿಕ್ಸ್‌/ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌ನಲ್ಲಿ ಪದವಿ
Job Location ಬೆಂಗಳೂರು (ಕರ್ನಾಟಕ), ಭಾರತ
Salary Scale ತಿಂಗಳಿಗೆ 18,000/- ರಿಂದ 20,000/-ರೂ
Application Start Date January 16, 2020
Application End Date January 30, 2020

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಇಲೆಕ್ಟ್ರಾನಿಕ್ಸ್‌/ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌ನಲ್ಲಿ ಪದವಿ ವಿದ್ಯಾರ್ಹತೆಯನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 15,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 400/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)ನ ಅಧಿಕೃತ ವೆಬ್‌ಸೈಟ್‌ http://www.itiltd-india.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ http://careers.itiltd-india.com/instructions_nsu_cta ಅಥವಾ http://careers.itiltd-india.com/index_nsu_cta ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ.

ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿ ಪ್ರಿಂಟೌಟ್ ಅನ್ನು ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಅಡಿಷನಲ್ ಜನರಲ್ ಮ್ಯಾನೇಜರ್,
ಹೆಚ್‌ಆರ್‌, ಐಟಿಐ ಲಿಮಿಟೆಡ್,
ನೆಟ್‌ವರ್ಕ್ ಸಿಸ್ಟ್ಸ್ಂ ಯುನಿಟ್, ಎಫ್‌-100,
ದೂರವಾಣಿ ನಗರ,
ಬೆಂಗಳೂರು ಪ್ಲಾಂಟ್,
ಬೆಂಗಳೂರು -560016

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI limited recruitment 2020 notification has been released on official website for the recruitment of 129 contract engineer posts. Interested candidates can apply before 30th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+