ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನಲ್ಲಿ ಮುಖ್ಯ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 24,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 16,2021 ರಂದು ಕೊನೆಗೊಳ್ಳುತ್ತದೆ.

ಐಟಿಐ ಲಿಮಿಟೆಡ್ 2021 ಖಾಲಿ ಹುದ್ದೆಗಳ ವಿವರ:
ಮುಖ್ಯ ವ್ಯವಸ್ಥಾಪಕ - 2 ಹುದ್ದೆ
ಪ್ರಾಜೆಕ್ಟ್ ವ್ಯವಸ್ಥಾಪಕ - 1 ಹುದ್ದೆ
ಒಟ್ಟು 3 ಹುದ್ದೆಗಳು
ಐಟಿಐ ಲಿಮಿಟೆಡ್ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶೇ.58ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.
ಐಟಿಐ ಲಿಮಿಟೆಡ್ ನೇಮಕಾತಿ 2021 ವಯೋಮಿತಿ :
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 42 ವರ್ಷ ವರ್ಷ ವಯಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಟಿಐಐ ಲಿಮಿಟೆಡ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಐಟಿಐ ಲಿಮಿಟೆಡ್ ನೇಮಕಾತಿ 2021 ವೇತನ :
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆಎ 80,240/-ರೂ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 71,717/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಐಟಿಐ ಲಿಮಿಟೆಡ್ ನೇಮಕಾತಿ 2021 ಅರ್ಜಿ ಶುಲ್ಕ :
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ, ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ನೇಮಕಾತಿ ಅಧಿಸೂಚನೆ 2021 ಅನ್ನು ಓದಬಹುದು.
ಐಟಿಐ ಲಿಮಿಟೆಡ್ ನೇಮಕಾತಿ 2021 ಅರ್ಜಿ ಸಲ್ಲಿಕೆ :
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ್ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆಯ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 20,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
General Manager -HR, ITI limited,
Regd & Corporate office ITI bhavan, Dooravani nagar,
Bengaluru -560016.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ