ಜವಾಹರ್‌ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (ಜೆಎನ್‌ಸಿಎಎಸ್ಆರ್) ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಪಿಹೆಚ್.ಡಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 47,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











