ಹಾಸನದಲ್ಲಿ ಜನವರಿ 23 ರಂದು ಉದ್ಯೋಗ ಮೇಳ

ಹಾಸನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಹಲವು ಕಂಪನಿಗಳು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಯುವಕರಿಗೆ ಉದ್ಯೋಗಾವಕಾಶ ನೀಡಲು ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಹಾಸನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಹಲವು ಕಂಪನಿಗಳು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಹಾಸನದಲ್ಲಿ ಉದ್ಯೋಗ ಮೇಳ

ಜನವರಿ 23ರ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ವಿದ್ಯಾರ್ಹತೆ

ಎಸ್‌ಎಸ್‌ಎಲ್‌ಸಿ ಪಾಸು/ಫೇಲು, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಎಂಬಿಎ, ಇಂಜಿನಿಯರಿಂಗ್, ನರ್ಸಿಂಗ್, ಡ್ರೈವರ್‌ನಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಹಾಸನ, ಮೈಸೂರು ಮತ್ತು ಬೆಂಗಳೂರಿನ ಹಲವು ಹೆಸರಾಂತ ಕಂಪನಿಗಳು ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.

ಹಾಸನದಲ್ಲಿ ಉದ್ಯೋಗ ಮೇಳ

ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್, ಆಧಾರ್ ಕಾರ್ಡ್, ಸ್ವವಿವರದ ಬಯೋಡೆಟ ಪ್ರತಿಗಳನ್ನು ತರಬೇಕು ಎಂದು ಸೂಚನೆ ನೀಡಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ.ವಿಜಯಲಕ್ಷ್ಮೀ ಅವರನ್ನು ಸಂಪರ್ಕಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 08172-268374

ಉದ್ಯೋಗ ಮೇಳಕ್ಕೆ ತಯಾರಾಗಿ ಹೋಗಿ

ಮೊದಲನೆಯದಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಅಲ್ಲಿಗೆ ಹೋಗುವ ಮುನ್ನ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು. ಸಂದರ್ಶನದ ವೇಳೆಗಿಂತ ಸ್ವಲ್ಪ ಮೊದಲೇ ಸ್ಥಳ ತಲುಪಿ.

ಸರಳವಾದ ಉಡುಗೆ ಧರಿಸಿ. ಮೇಕಪ್ ಸಹ ಸರಳವಾಗಿ ಗೌರವಯುತವಾಗಿದ್ದು, ಸ್ಮಾರ್ಟ್ ಲುಕ್ ಕೊಡುವಂತೆ ಇರಬೇಕು.

ನಿಮ್ಮ ಸಾಮರ್ಥ್ಯ, ಕೆಲಸದ ಬಗೆಗಿರುವ ಆಸಕ್ತಿ, ಶ್ರಮ, ದುಡಿಮೆ, ಪ್ರಾಮಾಣಿಕತನದ ಬಗ್ಗೆ ಹೇಳಿ.

ನೆನಪಿರಲಿ, ಆತ್ಮಪ್ರಶಂಸೆ ಅತಿಯಾಗದಂತೆ ಗಮನ ವಹಿಸಿ. ನಿಮಗಿರುವ ಪರಿಣತಿ, ವಿಶೇಷ ಅರಿವು, ಎಂಥ ಒತ್ತಡಕ್ಕೂ ಒಳಗಾಗದೇ ದುಡಿಯುವ ಮನೋಭಾವ, ಎಲ್ಲದರಲ್ಲೂ ನಿಮಗಿರುವ ಜ್ಞಾನದ ಬಗ್ಗೆ ತಿಳಿಸಿ ಅವರ ಗಮನ ಸೆಳೆಯಿರಿ.

More News  

For Quick Alerts
ALLOW NOTIFICATIONS  
For Daily Alerts

English summary
Hassan district employment exchange office organized job fair on January 23, 2018 at Employment Exchange office. Hassan, Mysusu and Bengaluru based companies will participate in job fair.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+