ಜೆಎಸ್ಎಸ್ ಮಹಾವಿದ್ಯಾಲಯದಲ್ಲಿ 29 ಫೀಲ್ಡ್ ವರ್ಕರ್, ಡಾಟಾ ಎಂಟ್ರಿ ವರ್ಕರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಡಿ.ಫಾರ್ಮಾ, ಪದವಿ, ಸ್ನಾತಕೋತ್ತರ ಪದವಿ, ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ, ಎಂ.ಎಸ್ಸಿ ಮತ್ತು ಪಿಹೆಚ್ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 12,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 120/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 10,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Principal,
JSS medical college,
Shivarathreeshwara nagar,
Mysore-570015.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.