Kalaburagi District Court Recruitment 2020: ವಿವಿಧ 56 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 56 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕಲಬುರಗಿ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಡಿ.31ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಶೀಘ್ರಲಿಪಿಗಾರ- 8 ಹುದ್ದೆಗಳು
ಬೆರಳಚ್ಚುಗಾರರು- 1 ಹುದ್ದೆಗಳು
ಬೆರಳಚ್ಚು ನಕಲುಗಾರರು- 1 ಹುದ್ದೆಗಳು
ಆದೇಶ ಜಾರಿಕಾರ- 2 ಹುದ್ದೆಗಳು
ಜವಾನ - 44 ಹುದ್ದೆಗಳು
ಒಟ್ಟು 56 ಹುದ್ದೆಗಳು

ವಿದ್ಯಾರ್ಹತೆ:

ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಹಿರಿಯ ಶ್ರೇಣಿಯ ಬೆರಳಚ್ಚು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಕಿರಿಯ ಶ್ರೇಣಿಯ ಬೆರಳಚ್ಚು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ಹಾಗೂ ಭಾರಿ ವಾಹನ ಚಾಲನಾ ಪತ್ರ ಹೊಂದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:

ಹುದ್ದೆಗಳ ಹೆಸರು ವೇತನ (ತಿಂಗಳಿಗೆ)
ಶೀಘ್ರಲಿಪಿಗಾರ ರೂ.27,650/- ರಿಂದ 52,650/-ರೂ
ಬೆರಳಚ್ಚುಗಾರ ರೂ.21,400/- ರಿಂದ 42,000/-ರೂ
ಬೆರಳಚ್ಚು ನಕಲುಗಾರ ರೂ.21,400/- ರಿಂದ 42,000/-ರೂ
ಆದೇಶ ಜಾರಿಕಾರ ರೂ.19,950/- ರಿಂದ 37,900/-ರೂ
ಜವಾನ ರೂ.17,000/- ರಿಂದ 28,950/-ರೂ

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 31,2020ರಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.
ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/kalaburagi-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಡಿಸೆಂಬರ್ 31,2020ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/kalaburagi-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District court of kalaburagi recruitment 2020 notification has been released for 56 various posts. Interested candidates can apply through online before Decmeber 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X