ಕಲಬುರಗಿ ಜಿಲ್ಲೆಯಲ್ಲಿ 172 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕಲಬುರಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 172 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 8.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಲಬುರಗಿ ಜಿಲ್ಲೆಯ 9 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 27 ಅಂಗನವಾಡಿ ಕಾರ್ಯಕರ್ತೆ ಹಾಗೂ 145 ಅಂಗನವಾಡಿ ಸಹಾಯಕಿ ಒಟ್ಟು 172 ಹುದ್ದೆಗಳನ್ನು ಗೌರವಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ ಮಾರ್ಚ್ 9,2019 ರಿಂದ ಏಪ್ರಿಲ್ 8,2019 ರ ತನಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ.

 ಕಲಬುರಗಿ ಜಿಲ್ಲಾ ಅಂಗನವಾಡಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
Organisation ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
Educational Qualification SSLC, 9ನೇ ತರಗತಿ
Job Location ಕಲಬುರಗಿ ಜಿಲ್ಲೆ (ಕರ್ನಾಟಕ)
Application Start Date March 9, 2019
Application End Date April 8, 2019

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ವಯೋಮಿತಿ:

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಮಾಡುವ ಬಗ್ಗೆ:

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

1 ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.

2 ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.

3 ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು.

4 ಅರ್ಹ ವಿದ್ಯಾರ್ಹತೆ ಹೊಂದಿದ ಶೇಕಡಾ 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು.

5 ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.

ಕಲಬುರಗಿ ಜಿಲ್ಲೆಯ ಖಾಲಿ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಮಾನದಂಡವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Kalaburagi District Women Child Development recruitment notification has been released on website for the recruitment of 172 Anganwadi Workers and Anganwadi Helpers posts. Interested candidates can apply through online before 8th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+