ಕಲಬುರಗಿ ಜಿಲ್ಲಾ ಪಂಚಾಯಿತಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ 32 ತಾಲೂಕು ಎಂಐಎಸ್ ಸಂಯೋಜಕರು, ತಾಲೂಕು ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:
ತಾಲೂಕು ಎಂಐಎಸ್ ಸಂಯೋಜಕರು 3 ಹುದ್ದೆಗಳು
ತಾಲೂಕು ಐಇಸಿ ಸಂಯೋಜಕರು 3 ಹುದ್ದೆಗಳು
ತಾಂತ್ರಿಕ ಸಹಾಯಕರು 25 ಹುದ್ದೆಗಳು
ಒಟ್ಟು 32 ಹುದ್ದೆಗಳು
ವಿದ್ಯಾರ್ಹತೆ:
ಬಿಸಿಎ/ಬಿ.ಎಸ್ಸಿ, ಪೋಸ್ಟ್ ಗ್ರಾಜುಯೇಟ್ ಪದವಿ, ಬಿ,ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗಳಿಗೆ 18,000/-ರೂ,
ತಾಲೂಕು ಐಇಸಿ ಸಂಯೋಜಕರು ಹುದ್ದೆಗಳಿಗೆ 18,000/-ರೂ ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kalaburagi.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











