Karnataka Anganawadi Recruitment 2021 : 1000 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಡಬ್ಲ್ಯೂಸಿಡಿ), ಕರ್ನಾಟಕದೆಲ್ಲೆಡೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1000ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡಲು ಆಸಕ್ತರಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ anganwadirecruit.kar.nic.in ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಅಂಗನವಾಡಿಗಳಲ್ಲಿ 1000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಕರ್ನಾಟಕ ಅಂಗನವಾಡಿ ನೇಮಕಾತಿ 2021ರ ಖಾಲಿ ಹುದ್ದೆಗಳ ವಿವರಗಳು :

ಹಾವೇರಿ ಜಿಲ್ಲೆ - 93 ಹುದ್ದೆಗಳು
ಕೊಡಗು - ಹುದ್ದೆಗಳ ಸಂಖ್ಯೆ ನಮೂದಿಸಿಲ್ಲ
ಚಿಕ್ಕಮಗಳೂರು - 87 ಹುದ್ದೆಗಳು
ಬಾಗಲಕೋಟೆ - ಹುದ್ದೆಗಳ ಸಂಖ್ಯೆ ನಮೂದಿಸಿಲ್ಲ
ತುಮಕೂರು - 358 ಹುದ್ದೆಗಳು
ಕೋಲಾರ - 171

ವಿದ್ಯಾರ್ಹತೆ :

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್‌.ಎಲ್‌.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ಆಯ್ಕೆಯ ಆದ್ಯತೆ:

ಈ ಕೆಳಕಂಡಂತೆ ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ.

ಆಸಿಡ್ ದಾಳಿಗೊಳಗಾದವರ ಆಯ್ಕೆ:

ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಅದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡತಕ್ಕದ್ದು.

ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆದ್ಯತೆ:

ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.

ವಿಧವೆಯರ ಆದ್ಯತೆ:

ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ. ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ:

ಅಂಗನವಾಡಿ ಕಾರ್ಯಕರ್ತೆಯು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ. ಇತರೆ ದೈಹಿಕ ಅಂಗವಿಕಲ್ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 13,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಜಿಲ್ಲಾವಾರು ಅಂಗನವಾಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ವೆಬ್‌ಸೈಟ್ https://anganwadirecruit.kar.nic.in/ ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka anganawadi recruitment 2021 notification has been released for more than 1000 anganawadi worker and helper posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+