Karnataka Apex Bank Recruitment 2022 : 79 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ 79 ಬ್ಯಾಂಕ್ ಸಹಾಯಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 17,2022 ರಿಂದ ಏಪ್ರಿಲ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಕೇಳಲಾಗಿರುವ ವಿದ್ಯಾರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆ ಇತರೆ ಮಾಹಿತಿಗಳ ಕುರಿತು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ 79 ಹುದ್ದೆಗಳ ನೇಮಕಾತಿ

Karnataka Apex Bank ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿಯ ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Karnataka Apex Bank ನೇಮಕಾತಿ 2022 ವಯೋಮಿತಿ :

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿಯ ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Karnataka Apex Bank ನೇಮಕಾತಿ 2022 ವೇತನ :

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿಯ ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,425/- ರಿಂದ 87,125/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Karnataka Apex Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿಯ ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

Karnataka Apex Bank ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿಯ ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 1,000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Karnataka Apex Bank ನೇಮಕಾತಿ 2022 ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿಯ ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.karnatakaapex.com/new/index.php/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 17,2022 ರಿಂದ ಏಪ್ರಿಲ್ 16,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
karnataka apex bank recruitment 2022 notification has been released for 79 bank assistant posts. Interested candidates can apply before April 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X