Karnataka Bank: ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ಬ್ಯಾಂಕ್ ದೇಶದಾದ್ಯಂತ ಖಾಲಿ ಇರುವ ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..

ವಿದ್ಯಾರ್ಹತೆ:

ಜನವರಿ 1,2020ರ ಅನ್ವಯ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಯುಜಿಸಿ ಇಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸ್ನಾತಕೋತ್ತರ ಪದವಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.

ವಯೋಮಿತಿ:

ಜನವರಿ 1,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕರ್ನಾಟಕ ಬ್ಯಾಂಕ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 69,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯು ಫೆಬ್ರವರಿ 16,2020ರಂದು ಬೆಂಗಳೂರು, ಧಾರವಾಡ-ಹುಬ್ಬಳ್ಳಿ, ಮಂಗಳೂರು, ಮುಂಬೈ ಮತ್ತು ನವದೆಹಲಿಯಲ್ಲಿ ನಡೆಯಲಿದೆ.

ಅರ್ಜಿ ಶುಲ್ಕದ ವಿವರ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜನವರಿ 18,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://karnatakabank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka bank recruitment 2020 notification has been released on official website for the recruitment of probationary officer (PO) posts. Interested candidates can apply through online before 18th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+