240 ಅರಣ್ಯ ರಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ

ದ್ವಿತೀಯ ಪಿಯುಸಿ ಓದಿದ ಅಭ್ಯರ್ಥಿಗಳಿಗೆ ಅರಣ್ಯ ಇಲಾಖೆಯಲ್ಲಿ ರಕ್ಷಕ ಹುದ್ದೆ ಖಾಲಿ ಇದ್ದು ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ದ್ವಿತೀಯ ಪಿಯುಸಿ ಓದಿದ ಅಭ್ಯರ್ಥಿಗಳಿಗೆ ಅರಣ್ಯ ಇಲಾಖೆಯಲ್ಲಿ ರಕ್ಷಕ ಹುದ್ದೆ ಖಾಲಿ ಇದ್ದು ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರಣ್ಯ ಇಲಾಖೆಯಲ್ಲಿ 240 ಅರಣ್ಯ ರಕ್ಷಕ ಹುದ್ದೆಗಳಿಗೆ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳಂತೆ 2012 ರಂತೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ವಿವರ

ಹುದ್ದೆಯ ಹೆಸರು: ಅರಣ್ಯ ರಕ್ಷಕ
ಒಟ್ಟು ಹುದ್ದೆ: 240
ವೇತನ ಶ್ರೇಣಿ: ರೂ.11600-21000/-

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ ಹನ್ನೆರಡನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಅರಣ್ಯ ರಕ್ಷಕ ಹುದ್ದೆ

ವಯೋಮಿತಿ

ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.

  • ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ
  • ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳಿಗೆ 32 ವರ್ಷ

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸತಕ್ಕದ್ದು. ಆನ್-ಲೈನ್ ಅರ್ಜಿಯ ಪ್ರತಿಯನ್ನು ಅಂಚೆ ಮುಖಾಂತರ ಅಥವಾ ಮುದ್ದಾಂ ಆಗಿ ಇಲಾಖೆಗೆ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ.
  • ಜನ್ಮ ದಿನಾಂಕ ದೃಢೀಕರಿಸುವ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರಳು, ಜಾತಿ/ಪ್ರವರ್ಗ ದೃಢೀಕರಿಸುವ ಪ್ರಮಾಣ ಪತ್ರಗಳು, ಗ್ರಾಮೀಣ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ , ವೈದ್ಯಕೀಯ ಪ್ರಮಾಣ ಪತ್ರ, ಸೈನಿಕ ಸೇವೆ ದೃಢೀಕರಣ ಮತ್ತು ಇತರೆ ಅವಶ್ಯವಿರುವ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಇಲಾಖಾ ವೆಬ್ಸೈಟ್ ಗೆ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಅಪ್ಲೋಡ್ ಮಾಡತಕ್ಕದ್ದು.
  • ಆನ್-ಲೈನ್ ಮೂಲಕ ಅರ್ಜಿಯನ್ನು ದಿನಾಂಕ 15-05-2017 ರಿಂದ 14-06-2017 ರ ಅಪರಾಹ್ನ 4-30 ಗಂಟೆಯವರೆಗೆ ಸಲ್ಲಿಸಬಹುದಾಗಿದೆ.
  • ಆನ್-ಲೈನ್ ಅರ್ಜಿ ಸಲ್ಲಿಸುವ ವಿಳಾಸ kfdrecruitment.in

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100 + ಸೇವಾ ಶುಲ್ಕ ರೂ.15 /-
  • ಪ.ಜಾ/ಪ.ಪಂ/ಪ್ರ-1 /ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.25 + ಸೇವಾ ಶುಲ್ಕ ರೂ.15 /-
  • ಅರ್ಜಿ ಶುಲ್ಕವನ್ನು ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ಮುದ್ರಿತ ಅರ್ಜಿ ಪ್ರತಿಯನ್ನು ತೋರಿಸಿ, ಈ ಮೇಲೆ ಹೇಳಿರುವ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕ ಅಭ್ಯರ್ಥಿಗಳು ಪಾವತಿಸತಕ್ಕದ್ದು.

ಆಯ್ಕೆ ಪ್ರಕ್ರಿಯೆ

ಮೂಲ ದಾಖಲೆ/ಪ್ರಮಾಣ ಪತ್ರಗಳ ಪರಿಶೀಲನೆ, ದೇಹದಾರ್ಡ್ಯತೆ , ದೈಹಿಕ ತಾಳ್ವಿಕೆ, ದೈಹಿಕ ಕಾರ್ಯ ಸಮರ್ಥತೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ವಿಳಾಸ www.aranya.gov.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Forest Department invites online application to fill 240 forest guard through direct recruitment
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+