ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1 ಕಾನೂನು ಸಲಹೆಗಾರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಅರ್ಹತೆ ಏನಿರಬೇಕು ?:
ಅರ್ಜಿದಾರರು ಜಿಲ್ಲಾ ನ್ಯಾಯಾಧೀಶರಾಗಿ ಅಥವಾ ಅದಕ್ಕಿಂತ ಮೇಲ್ಪಟ್ಟ ನ್ಯಾಯಾಲಯದ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ. ನಿವೃತ್ತರಾಗಿರಬೇಕು ಹಾಗೂ ಕಾನೂನು ವಿಷಯಗಳು ಮತ್ತು ಸೇವಾ ವಿಷಯಗಳ ಬಗ್ಗೆ ಜ್ಞಾನ ಹೊಂದಿರುವವರಾಗಿರಬೇಕು.
ಹುದ್ದೆಯ ವಿವರ:
ಹುದ್ದೆಯ ಹೆಸರು: ಕಾನೂನು ಸಲಹೆಗಾರ
ಹುದ್ದೆಯ ಸಂಖ್ಯೆ: 1
ಕರ್ತವ್ಯ ನಿರ್ವಹಿಸುವ ಕೇಂದ್ರಸ್ಥಾನ:
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿ
ಅರಣ್ಯ ಭವನ, ಮಲ್ಲೇಶ್ವರಂ,
ಬೆಂಗಳೂರು.
ವಯೋಮಿತಿ:
ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕಕ್ಕೆ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಕಾನೂನು ಸಲಹೆಗಾರ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ವೇತನ ರೂ. 60,000/- ಗಳನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ ?:
ಅರ್ಜಿ ಮತ್ತು ಅಧಿಸೂಚನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://aranya.gov.in/new/homesh.aspx ರಲ್ಲಿ ನೀಡಲಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ. ಅರ್ಜಿದಾರರು ಜಿಲ್ಲಾ ನ್ಯಾಯಾಧೀಶರಾಗಿ ಅಥವಾ ಅದಕ್ಕಿಂತ ಮೇಲ್ಪಟ್ಟ ನ್ಯಾಯಾಲಯದ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ ಕುರಿತು ಸೇವಾ ವಿವರಗಳ ಮಾಹಿತಿ ಹಾಗೂ ವಯೋಮಿತಿಯ ಕುರಿತು ಅಧಿಕೃತ ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಕಛೇರಿಯ ವಿಳಾಸಕ್ಕೆ ಡಿಸೆಂಬರ್ 16,2019ರ ಸಂಜೆ 4:30ರೊಳಗೆ ಅಂಚೆ ಅಥವಾ ಮುದ್ದಾಂ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











