ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನೇಮಕಾತಿ

Posted By:

ಬೆಂಗಳೂರಿನ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿತ್ತ ವ್ಯವಸ್ಥಾಪಕರು ಮತ್ತು ಮುಖ್ಯ ಲೆಕ್ಕಾಧಿಕಾರಿಯ ಒಂದು ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಹುದ್ದೆಯ ಹೆಸರು: ವಿತ್ತ ವ್ಯವಸ್ಥಾಪಕರು ಮತ್ತು ಮುಖ್ಯ ಲೆಕ್ಕಾಧಿಕಾರಿ
ವೇತನ ಶ್ರೇಣಿ: ರೂ.36300-53850/- ಹಾಗೂ ಸರ್ಕಾರವು ನಿಯಮಾನುಸಾರ ಕಾಲಾನುಕಾಲಕ್ಕೆ ನೀಡಲ್ಪಡುವ ಇನ್ನಿತರೆ ಭತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನೇಮಕಾತಿ

ಅರ್ಹತೆ ಮತ್ತು ನಿಬಂಧನೆಗಳು

ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಯು ಕಡ್ಡಾಯವಾಗಿ ಹೊಂದಿರಬೇಕು.
1. ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದ ಬಿ.ಕಾಂ ಪಧವೀಧರರಾಗಿರಬೇಕು.
2. ಇನ್ಸ್‍ಸ್ಟಿಟ್ಯೂಟ್ ಆಪ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸಹ ಸದಸ್ಯರಾಗಿರಬೇಕು.
ಅಪೇಕ್ಷಣೀಯ:
3. ಕಾನೂನು ಪದವಿ.
4. ಪ್ರಮುಖ ಸಂಸ್ಥೆಯಲ್ಲಿ ಸಮಾನ ಹುದ್ದೆಯಲ್ಲಿ 5 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ

ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು 45 ವರ್ಷಗಳ ವಯಸ್ಸನ್ನು ಮೀರಿರಬಾರದು.

ಅರ್ಜಿ ನಮೂನೆ

ಅಭ್ಯರ್ಥಿಗಳು ಅಧಿಸೂಚನೆ ಹಾಗೂ ನಿಗದಿತ ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್ www.kfdcl.kar.nic.in ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ನಿಗದಿತ ನಮೂನೆಯ ಅರ್ಜಿಯಲ್ಲಿ ಮಾಹಿತಿಗಳನ್ನು ಆಂಗ್ಲ ಭಾಷೆಯ Capital letters ಗಳಲ್ಲಿ ಅಥವಾ ಕನ್ನಡ ಭಾಷೆಯ ದಪ್ಪ ಅಕ್ಷರಗಳಲ್ಲಿ ಸ್ಪಷ್ಟವಾಗಿ ಬರೆದು ಅಥವಾ ಬೆರಳಚ್ಚು ಮಾಡಿಸಿ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಸಲ್ಲಿಸಬೇಕಾದ ವಿಳಾಸ

ನಿಗದಿತ ನಮೂನೆಯ ಅರ್ಜಿಯನ್ನು ಸರಿಯಾಗಿ, ಸ್ಪಷ್ಟವಾಗಿ ಮತ್ತು ಪೂರ್ಣವಾಗಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಲಕೋಟೆಯಲ್ಲಿರಿಸಿ, ಲಕೋಟೆಯ ಮೇಲೆ "ವಿತ್ತ ವ್ಯವಸ್ಥಾಪಕರು ಮತ್ತು ಮುಖ್ಯ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ" ಎಂದು ಸ್ಪಷ್ಟವಾಗಿ ನಮೂದಿಸಿ, ತಕ್ಕ ಮೌಲ್ಯದ ಅಂಚೆ ಚೀಟಿ ಅಂಟಿಸಿ, ಸಾಧಾರಣ ಅಂಚೆ ಮುಖಾಂತರ ಮಾತ್ರ ಈ ಕೆಳಗೆ ನಮೂದಿಸಿರುವ ವಿಳಾಸಕ್ಕೆ ಕಳುಹಿಸಬೇಕು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು
ವ್ಯವಸ್ಥಾಪಕ ನಿರ್ದೇಶಕರು,
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ,
1ನೇ ಮಹಡಿ, ವನವಿಕಾಸ, 18ನೇ ಕ್ರಾಸ್,
ಮಲ್ಲೇಶ್ವರಂ, ಬೆಂಗಳೂರು-560003.

ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿರುವ ಅರ್ಜಿಯನ್ನು ಭರ್ತಿ ಮಾಡುವ ವೇಳೆಗೆ ಸಂಬಂಧಿಸಿದ ಪ್ರಾಧಿಕಾರಗಳಿಂದ ಅವಶ್ಯಕವಿರುವ ಎಲ್ಲಾ ಮೂಲ ದಾಖಲೆ/ಪ್ರಮಾಣ ಪತ್ರಗಳನ್ನು ಪಡೆದುಕೊಂಡು ಸದರಿ ಮೂಲ ದಾಖಲೆ/ಪ್ರಮಾಣ ಪತ್ರಗಳಲ್ಲಿರುವ ಮಾಹಿತಿಯನ್ನು ಸರಿಯಾಗಿ, ಸ್ಪಷ್ಟವಾಗಿ ಮತ್ತು ಸಮರ್ಪಕವಾಗಿ ನಿಗದಿತ ನಮೂನೆಯ ಅರ್ಜಿಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 15.12.2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 05.01.2018

ಅರ್ಜಿ ಶುಲ್ಕ

ಯಾವುದೇ ರೀತಿಯ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಬೇಕಾಗಿರುವುದಿಲ್ಲ.

ಲಿಖಿತ ಪರೀಕ್ಷೆ

ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka Forest Development corporation Notification calling for applications for the post of Finance Manager and Chief Accounts Officer

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia