UG College Recruitment 2021 : 1242 ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ ಸರ್ಕಾರ

ಯುಜಿ ಕಾಲೇಜುಗಳಲ್ಲಿ 1242 ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲ ಹುದ್ದೆಗಳ ನೇಮಕಾತಿ

ರಾಜ್ಯದ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರ ಅನುಮತಿ ನೀಡಿದೆ. ನೇಮಕಾತಿ ಪ್ರಕಟಣೆಯನ್ನು ಅತೀ ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು‌ ಸೂಚನೆ ನೀಡಿದೆ. ಈ ಕುರಿತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ​​​ ಪತ್ರ ಬರೆದಿದ್ದು, ವಿವಿಧ ವಿಶ್ವವಿದ್ಯಾಲಯಗಳು ಹೊರಡಿಸಿರುವ ಸುತ್ತೋಲೆಗಳಲ್ಲಿ 2021-22ನೇ ಶೈಕ್ಷಣಿಕ ವರ್ಷ ಬರುವ ಆಗಸ್ಟ್‌ನಿಂದ ನವೆಂಬರ್‌ ಒಳಗಾಗಿ ಪ್ರಾರಂಭಿಸುವುದಾಗಿ ತಿಳಿಸಿದೆ.

ಈಗಾಗಲೇ ಅನುದಾನಿತ ಪದವಿ ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿಗಳು ಆರಂಭವಾಗಿದ್ದು, ಸರ್ಕಾರದ ಅನುಮತಿ ಮೇರೆಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನೇಮಕಾತಿ ಆದೇಶ ನೀಡುವಂತೆ ಸೂಚಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka government approved for appointment of 1242 assistant professor and 310 principal posts in ug colleges.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X