Karnataka Teachers Recruitment 2021 : ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಗುಡ್ ನ್ಯೂಸ್ : ಸರ್ಕಾರಿ ಶಾಲೆಗಳಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿ ರಿಲೀಸ್

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು "ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಶೀಘ್ರದಲ್ಲಿ ನೇಮಕ ಪ್ರಕ್ರಿಯೆ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ.

ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23,000 ಅತಿಥಿ ಶಿಕ್ಷಕರ ಸೇವೆ ಪಡೆಯಲಾಗಿದ್ದು, ಹೆಚ್ಚುವರಿಯಾಗಿ 4,000 ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಿದ್ದೇವೆ ಎಂಬುದನ್ನು ಉಲ್ಲೇಖಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka government decided to recruit 15,000 teachers in the academic year 2021-22 to fill vacancies in government schools, notifications will issued soon says Education Minister BC nagesh.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X