ಕರ್ನಾಟಕ ಉಚ್ಛ ನ್ಯಾಯಾಲಯ 20 ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕರ್ನಾಟಕ ಉಚ್ಛ ನ್ಯಾಯಾಲಯ 20 ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬಹುದು.

 ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಕಾನೂನು ಪದವೀಧರರಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ
Organisation ಕರ್ನಾಟಕ ಉಚ್ಛ ನ್ಯಾಯಾಲಯ
Educational Qualification ಕಾನೂನು ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale 16,500/-ರೂ
Application Start Date March 23, 2019
Application End Date April 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದವ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ 16,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬಹುದು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ರಿಜಿಸ್ಟ್ರಾರ್ ಜನರಲ್,
ಕರ್ನಾಟಕ ಉಚ್ಛ ನ್ಯಾಯಾಲಯ,
ಬೆಂಗಳೂರು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka high court recruitment notification has been released on official website for the recruitment of 20 law clerk-cum-research assistant posts.Interested candidates can apply
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X