ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಇಲ್ಲಿ 95 ಗ್ರೂಪ್ ಡಿ (ಜವಾನರು, ಕಾವಲುಗಾರರು, ಸ್ವೀಪರ್‌ಗಳು ಮತ್ತು ಹೌಸ್ ಕೀಪಿಂಗ್ ಜವಾನರು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಗ್ರೂಪ್ ಡಿ |
| Organisation | ಕರ್ನಾಟಕ ಉಚ್ಛ ನ್ಯಾಯಾಲಯ |
| Educational Qualification | ಎಸ್.ಎಸ್.ಎಲ್.ಸಿ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 19,900/-ರಿಂದ 63,200/--ರೂ |
| Application Start Date | May 3, 2019 |
| Application End Date | June 3, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಕನಿಷ್ಟ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/-ರಿಂದ 63,200/--ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











